ರಾಜಕೀಯ

ಬೈಂದೂರಿನಲ್ಲಿ ಯಡಿಯೂರಪ್ಪ, ಅಣ್ಣಾಮಲೈ ರೋಡ್ ಶೋ..ಬಿ.ವೈ.ರಾಘವೇಂದ್ರ ಪರ ಮತಯಾಚನೆ

Views: 78

ಬೈಂದೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಕೆ. ಅಣ್ಣಾಮಲೈ ಮತ್ತು ಬಿ. ಎಸ್. ಯಡಿಯೂರಪ್ಪ ಬಿ.ವೈ.ರಾಘವೇಂದ್ರ ಪರವಾಗಿ ಶುಕ್ರವಾರ ಮತಯಾಚನೆ ಮಾಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ  ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಬೃಹತ್ ರೋಡ್ ಶೋ ನಡೆಯಿತು. ಮೇ 7ರಂದು ಮತದಾನ ನಡೆಯಲಿದ್ದು, ಭಾನುವಾರ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ಚುನಾವಣಾ ಪ್ರಚಾರದ ಅಂಗವಾಗಿ ಬೈಂದೂರು ಪಟ್ಟಣದಲ್ಲಿ ಹಾಗೂ ಶಿರೂರು ಭಾಗದಲ್ಲಿ ಆಯೋಜಿಸಿದ್ದ ಬೃಹತ್ ರೋಡ್ ಶೋನಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ನಟಿ ತಾರಾ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಪರವಾಗಿ ಮತದಾರ ಬಾಂಧವರನ್ನು ಭೇಟಿ ಮಾಡಿ ಮತ ಭೇಟೆ ನಡೆಸಿದರು.

ರೋಡ್‌ ಶೋನಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ, ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ, ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಸೇರಿದಂತೆ ಅನೇಕರು ಪಾಲ್ಗೊಂಡರು.

ಉಡುಪಿ ಜಿಲ್ಲೆಯ ಬೈಂದೂರು ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುತ್ತದೆ. ಮೇ 7ರ ಮಂಗಳವಾರ ಚುನಾವಣೆ ನಡೆಯಲಿದ್ದು, ಬಿಜೆಪಿಯಿಂದ ಬಿ. ವೈ. ರಾಘವೇಂದ್ರ, ಕಾಂಗ್ರೆಸ್‌ನಿಂದ ಗೀತಾ ಶಿವರಾಜ್‌ ಕುಮಾರ್ ಅಭ್ಯರ್ಥಿಗಳು.

ಬೈಂದೂರಿನಲ್ಲಿ ರೋಡ್ ಶೋ ನಡೆಸಿದ ಬಳಿಕ ಬಿಜೆಪಿ ನಾಯಕರು ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬರಗಾಲದಿಂದ ತತ್ತರಿಸಿರುವ ರಾಜ್ಯವನ್ನು ಉತ್ತಮ ವರ್ಷಧಾರೆ ಸುರಿಸುವ ರಕ್ಷಿಸುವಂತೆ ಪ್ರಾರ್ಥಿಸಿದರು.

Related Articles

Back to top button
error: Content is protected !!