ಜನಮನ

ಬೈಂದೂರು:ಪೇಟೆಗೆ ಹೋಗಿ ಬರುವುದಾಗಿ ಹೇಳಿದ ಮಹಿಳೆ ನಾಪತ್ತೆ 

Views: 72

ಕನ್ನಡ ಕರಾವಳಿ ಸುದ್ದಿ: ಬೈಂದೂರು ತಾಲೂಕು ಕಿರಿಮಂಜೇಶ್ವರದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್‌ ಠಾಣೆ .: 08254-251033, 9480805459, ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related Articles

Back to top button
error: Content is protected !!