ಬೈಂದೂರು: ಉಪ್ಪುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು
Views: 29
ಕನ್ನಡ ಕರಾವಳಿ ಸುದ್ದಿ: ಬೈಂದೂರು ತಾಲೂಕಿನ ಉಪ್ಪುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಉಪ್ಪುಂದ ಗ್ರಾಮದ ಹೊಳೆಬಾಗಿಲು ಬೈಲುಮನೆಯ ಮಾಚ ದೇವಾಡಿಗ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ತೀರಾ ಎಡಕ್ಕೆ ಚಲಾಯಿಸಿದ್ದರಿಂದ ರಸ್ತೆ ಬದಿಯ ಪುಟ್‌ಪಾತಿಗೆಗೆ ಡಿಕ್ಕಿಯಾಗಿ, ನಂತರ ಅಲ್ಲೇ ಮುಂದೆ ರಸ್ತೆ ದಾಟಲು ನಿಂತಿದ್ದ ಮಾಚ ದೇವಾಡಿಗರಿಗೆ ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯ ರಭಸಕ್ಕೆ ಮಾಚ ಅವರು ಸ್ವಲ್ಪ ದೂರಕ್ಕೆ ರಸ್ತೆಗೆ ಎಸೆಯಲ್ಪಟ್ಟು ರಸ್ತೆಯ ಮೇಲೆ ಬಿದ್ದ ಪರಿಣಾಮ ಅವರ ಮುಖಕ್ಕೆ ಹಾಗೂ ದೇಹದ ಇತರ ಭಾಗಗಳಿಗೆ ಗಂಬೀರ ಗಾಯವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಾಚ ದೇವಾಡಿಗ ಅವರು ಸ್ವಸಹಾಯ ಸಂಘದ ಹಣವನ್ನು ಕಟ್ಟಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸ್ಥಳೀಯರು ತಕ್ಷಣದ ಸ್ಪಂದಿಸಿ ಮೃತದೇಹವನ್ನು ಸಾಗಿಸುವ ವ್ಯವಸ್ಥೆ ಮಾಡಿದರು. ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಆಫಘಾತದ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






