ಕರಾವಳಿ

ಬೈಂದೂರು: ಕಾಲೇಜಿಗೆ ತೆರಳಿ ನಾಪತ್ತೆಯಾಗಿದ್ದ ಕೊಲ್ಲೂರಿನ ವಿದ್ಯಾರ್ಥಿನಿ ಮದುವೆಯಾಗಿ ಪತ್ತೆ.!

Views: 467

ಮೂಡುಬಿದಿರೆ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ಕಾಣೆಯಾದ ವಿದ್ಯಾರ್ಥಿನಿ.

ಕಾಲೇಜಿಗೆ ಹೋಗದೆ ಕಾಣೆಯಾದ ವಿದ್ಯಾರ್ಥಿನಿ ತನ್ನ ಪ್ರಿಯಕರನ ಜೊತೆ ಮದುವೆಯಾಗಿ ಪ್ರತ್ಯಕ್ಷಳಾಗಿದ್ದಾಳೆ !

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಆದಿರಾ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ಫೆ.23 ರಂದು ಬೆಳಿಗ್ಗೆ ಕಾಲೇಜಿನ ಬಸ್ಸಲ್ಲಿ ಬಂದಿದ್ದ ಆಕೆ ಕನ್ನಡ ಭವನ ಬಳಿ ಇಳಿದು ಹೋದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದರು. ಇದೀಗ ಆಕೆ ತನ್ನ ಪ್ರಿಯಕರನೊಂದಿಗೆ ಕೇರಳದಲ್ಲಿ ಮದುವೆಯಾಗಿರುವುದಾಗಿ ತಿಳಿದು ಬಂದಿದೆ. ತನ್ನದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದ ಆಕೆ ಆತನನ್ನೇ ಮದುವೆಯಾಗಿದ್ದಾಳೆಂದು ತಿಳಿದು ಬಂದಿದ್ದು ಮೂಡುಬಿದಿರೆ ಠಾಣೆಗೆ ಹಾಜರಾಗುವ ಸಾಧ್ಯತೆಯಿದೆ.

Related Articles

Back to top button
error: Content is protected !!