ಇತರೆ
ಬೈಂದೂರು: ರೈಲ್ವೇ ಸಿಬ್ಬಂದಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಬರುವಾಗ ಚರಂಡಿಗೆ ಬಿದ್ದು ಸಾವು

Views: 100
ಬೈಂದೂರು: ತಾಲೂಕಿನ ರೈಲ್ವೇ ಸ್ಟೇಷನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗಟಾರಕ್ಕೆ ಬಿದ್ದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಗುರುವಾರ ಸಂಭವಿಸಿದೆ.
ಬೈಂದೂರು ಬಾಡ ನಿವಾಸಿ ಗಣಪಯ್ಯ ಶೇರುಗಾರ ಅವರ ಪುತ್ರ ಸಂಜಯ ಕುಮಾರ (52) ಮೃತರು. ಇಲ್ಲಿನ ಕೊಂಕಣ ರೈಲ್ವೇಯಲ್ಲಿ ಎಂಜಿನಿಯರಿಂಗ್ ವಿಭಾಗದಲ್ಲಿ ಟ್ರಾಕ್‌ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರು ರಾತ್ರಿ ಪಾಳಿ ಕರ್ತವ್ಯ ಮುಗಿಸಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಭಟ್ಕಳದಿಂದ ಬೈಂದೂರು ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.