ಶಿಕ್ಷಣ

ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿ ಪಡೆದ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

Views: 410

ಕಿರಿಮಂಜೇಶ್ವರ: ಕರ್ನಾಟಕ ಸರ್ಕಾರ ,ಶಾಲಾ ಶಿಕ್ಷಣ ಇಲಾಖೆ ಕೇಂದ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ,ಇವರ ಸಹಭಾಗಿತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿಯಲ್ಲಿ ನಡೆದ , ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

ಪ್ರಣತ್ ಶೆಟ್ಟಿ(9ನೇ ತರಗತಿ) ಮಿಮಿಕ್ರಿಯಲ್ಲಿ ದ್ವಿತೀಯ ಸ್ಥಾನ , ಪೌಝಾನ್ (9ನೇ ತರಗತಿ) ಅರೇಬಿಕ್ ಧಾರ್ಮಿಕ ಪಠಣದಲ್ಲಿ ದ್ವಿತೀಯ ಸ್ಥಾನ, ಋತು( 10ನೇ ತರಗತಿ) ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪ್ರತೀಕ್ಷಾ (9ನೇ ತರಗತಿ) ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ ಸ್ಥಾನ, ಶ್ರಿಯಾ ಕೆ (6ನೇ ತರಗತಿ) ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ, ಭೋಧಕ/ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button