ಇತರೆ

ಬೈಂದೂರು: ಶಿರೂರಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ವ್ಯಕ್ತಿ ಸ್ಥಳದಲ್ಲೇ ಸಾವು

Views: 47

ಬೈಂದೂರು:ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿದೆ. ಇರ್ಷಾದ್ ( 56 ) ಮೃತ ದುರ್ದೈವಿ.

ನಿನ್ನೆ ತಡರಾತ್ರಿ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಜೊತೆಗೆ ಭರ್ಜರಿ ಮಳೆಯಾಗಿದ್ದು, ಗಾಳಿಗೆ ವಿದ್ಯುತ್‌ ತಂತಿ ತುಂಡಾಗಿ ರಸ್ತೆಗೆ ಬಿದ್ದಿದೆ. ಇಂದು ಬೆಳಗ್ಗೆ ಇರ್ಷಾದ್ ಮನೆಯಿಂದ ರಸ್ತೆಗೆ ಬಂದ ಸಂದರ್ಭದಲ್ಲಿ ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದೇ ತುಳಿದಿದ್ದಾರೆ. ಈ ವೇಳೆ ಏಕಾಏಕಿ ವಿದ್ಯುತ್‌ ಪ್ರವಹಿಸಿದ್ದು, ಇರ್ಷಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಮೆಸ್ಕಾಂಗೆ ವಿಷಯ ತಿಳಿಸಿದ್ದು, ಘಟನಾ ಸ್ಥಳಕ್ಕಾಗಮಿಸಿದ ಮೆಸ್ಕಾಂ ಸಿಬ್ಬಂದಿ ತುಂಡಾಗಿದ್ದ ವಿದ್ಯುತ್ ತಂತಿ ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!