ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಸ್ ಸಂಚಾರ, ವಿದ್ಯಾರ್ಥಿಗಳ ಹರ್ಷ

Views: 1
ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಮಾರು 40 ವರ್ಷಗಳ ಇತಿಹಾಸ ಹೊಂದಿದ್ದು, ಈ ಕಾಲೇಜಿಗೆ ಬರುವ ದೂರದ ಗ್ರಾಮೀಣ ಭಾಗಗಳಿಂದ ಬರುವ ವಿದ್ಯಾರ್ಥಿಗಳು ನಡೆದುಕೊಂಡೆ ಹೋಗಬೇಕಿತ್ತು, ಬಸ್ ಸಂಚಾರ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದ್ದು, ಕಾಲೇಜಿನ ದಾಖಲಾತಿಯ ಮೇಲೆ ತುಂಬಾ ಪರಿಣಾಮ ಬೀರಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖ ಆಗಿತ್ತು.
ಇದೀಗ ಬೈಂದೂರು ಹೆದ್ದಾರಿಯಿಂದ ದೂರದ ಗಂಗನಾಡು ಪ್ರದೇಶದಲ್ಲಿರುವ ಕಾಲೇಜಿಗೆ ಬಸ್ ಸಂಚರಿಸುವ ಮೂಲಕ ಹಲವಾರು ವರ್ಷಗಳ ಸಮಸ್ಯೆಗೆ ಮುಕ್ತಿ ದೊರಕಿದ್ದು, ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಈ ಕುರಿತು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರಿಗೆ ಸಮಸ್ಯೆ ಕುರಿತು ಮನವಿ ಮಾಡಿಕೊಂಡಿದ್ದರಿಂದ ಶಾಸಕರು ಈ ಸಮಸ್ಯೆಯನ್ನು ಅರಿತು ಸಾರಿಗೆ ಸಚಿವರ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕಾಲೇಜಿಗೆ ಬಸ್ ವ್ಯವಸ್ಥೆ ಸಂಚರಿಸುವಂತೆ ವ್ಯವಸ್ಥೆ ಮಾಡಿದ್ದಾರೆ. ಶಾಸಕರ ಪ್ರಯತ್ನದಿಂದಾಗಿ ಕಾಲೇಜಿಗೆ ಬಸ್ ಸಂಚಾರ ಆರಂಭಗೊಂಡಿದೆ. ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೋಧನಾ ಸಿಬ್ಬಂದಿಗೆ ತುಂಬಾ ಅನುಕೂಲವಾಗಿದೆ. ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಶಾಸಕರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ ಸಂಬಂಧಪಟ್ಟ ಇಲಾಖೆಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.






