ಇತರೆ
ಬೈಂದೂರು: ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗ-ನಗದು ದೋಚಿ ಪರಾರಿ
Views: 74
ಕನ್ನಡ ಕರಾವಳಿ ಸುದ್ದಿ: ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಹಾಡಹಗಲೇ ದೋಚಿ ಪರಾರಿಯಾದ ಘಟನೆ ಬೈಂದೂರು ತಾಲೂಕಿನ ಪಡುವರಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಇಲ್ಲಿನ ಪಟವಾಲ್ ಹೌಸ್ ಅವರ ಮನೆಯಿಂದ ಅಂದಾಜು 20 ಪವನ್ ಚಿನ್ನ ಹಾಗೂ 2 ಲಕ್ಷ ರೂಪಾಯಿ ಕಳವಾಗಿದೆ. ಈ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.
ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಹತ್ತಿರ ಬಂದು ನೋಡಿದಾಗ ಬೀಗ ಒಡೆದಿರುವುದು ಗೊತ್ತಾಗಿದೆ. ಕೂಡಲೇ ಪರಮೇಶ್ವರ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದರು.ಮನೆಯ ಕಪಾಟಿನಲ್ಲಿದ್ದ ವಸ್ತುಗಳನ್ನು ಬ್ಯಾಗ್‌ಗಳಲ್ಲಿದ್ದ ವಸ್ತುಗಳನ್ನು ಕಳ್ಳರು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಈ ಮನೆಯಲ್ಲಿ ಪರಮೇಶ್ವರ ಪಟವಾಲ್ ಅವರ ಮಗ, ಸೊಸೆ ಮತ್ತು ‘ಇಬ್ಬರು ಮೊಮ್ಮಕ್ಕಳು ವಾಸಿಸುತ್ತಿದ್ದಾರೆ.
ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.






