ಸಾಂಸ್ಕೃತಿಕ

ಬೈಕಾಡಿ- ಗಾಂಧಿನಗರದ ಸೂಪರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ 

Views: 138

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಬೈಕಾಡಿ ಗಾಂಧಿನಗರದ ಸೂಪರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್(ರಿ) ನಲ್ಲಿ 79ನೆಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಅಂಗನವಾಡಿ ಶಿಕ್ಷಕಿ ಕುಮಾರಿ ರಕ್ಷಿತಾ ಹಾಗೂ ಸ್ತೀ ಶಕ್ತಿ ಸಂಘದ ಸದಸ್ಯೆ ಆಯುಷಾ ಭಾನು ಧ್ವಜಾರೋಹಣ ನೆರವೇರಿಸಿದರು.

ಗ್ರಾಮ ಪಂಚಾಯಿತಿ ಸದಸ್ಯೆ ಜೆಸಿಂತಾ ಪಾಯಸ್, ಕ್ಲಬ್ ಸದಸ್ಯರಾದ ಉಮೇಶ್, ಸೂಪರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ನ ಎಲ್ಲಾ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

ಸದಾಶಿವ ಕುಕ್ಡೆ, ಸ್ವಾಗತಿಸಿದರು. ಸಂಘದ ಗೌರವಾಧ್ಯಕ್ಷರಾದ ಭಾಸ್ಕರ್ ಎಸ್ ಅವರು ಅತಿಥಿಗಳಿಗೆ ಪುಷ್ಪ ನೀಡಿ ಗೌರವಿಸಿದರು. ಶುಭಕರ ಕಾರ್ಯಕ್ರಮ ನಿರ್ವಹಿಸಿದ್ದರು.ದಿನೇಶ್ ವಂದಿಸಿದರು. 

ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿಗಳು ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿದರು.

ಗ್ರಾಮಸ್ಥರು, ಮುದ್ದು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.

Related Articles

Back to top button