ಇತರೆ
ಬೈಕ್ -ಶಾಲಾ ವಾಹನದ ನಡುವೆ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು
Views: 225
ಕನ್ನಡ ಕರಾವಳಿ ಸುದ್ದಿ: ಬೈಕ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತಲ್ಲಿ ಮೂವರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಈ ಅಪಘಾತ ಸಂಭವಿಸಿದೆ. ಒಂದೇ ಬೈಕ್ ನಲ್ಲಿ ಮೂವರು ಮಕ್ಕಳು ಸೇರಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಬೈಕ್ ಹಾಗೂ ಶಾಲಾ ವಾಹನ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಮಕ್ಕಳು ಹಾಗೂ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.






