ಬೌದ್ಧ ಧರ್ಮದ ಸಂಪ್ರದಾಯದಂತೆ ನಾಳೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ

Views: 62
ಮೈಸೂರು: ಸಂಸದ ಶ್ರೀನಿವಾಸ್ ಪ್ರಸಾದ್ (76) ವರ್ಷ ವಯಸ್ಸಿನ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರ ಪುತ್ರಿ ಪ್ರತಿಮಾ ತಂದೆಯ ಅಂತ್ಯಕ್ರಿಯೆಯ ಬಗ್ಗೆ ಮಾತನಾಡಿದ್ದಾರೆ, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ಮಧ್ಯಾಹ್ನದ ತನಕ ಜಯಲಕ್ಷ್ಮಿಂ ಪುರಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ 1 ಗಂಟೆಗೆ ಅಶೋಕ್ ಪುರಂನ ಎನ್.ಟಿ.ಎಂ ಶಾಲೆಗೆ ಮೃತದೇಹ ರವಾನಿಸಲಾಗುತ್ತದೆ. ಬಳಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಪ್ರತಿಮಾ, ಬೆಳಿಗ್ಗೆ ಅಶೋಕ ಪುರಂನಲ್ಲಿ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಮಾನಂದವಾಡಿ ರಸ್ತೆಯಲ್ಲಿರುವ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಬೌದ್ಧ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಿದ್ದೇವೆ. ಮೈಸೂರಿನ ಸಿಲ್ಕ್ ಫ್ಯಾಕ್ಟರಿ ಸರ್ಕಲ್ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಎಜುಕೇಷನಲ್ ಅಂಡ್ ಕಲ್ಚರಲ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.






