ಕರಾವಳಿ
ಬ್ಯಾಂಕ್‌ನಲ್ಲೇ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 227
ಮಡಿಕೇರಿ : ಬ್ಯಾಂಕ್ ಮ್ಯಾನೇಜರ್ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಬುಧವಾರ ಸಂಜೆ ನಡೆದಿದೆ.
ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕ ವಿಜು(46) ಎಂಬುವವರೇ ಕಕ್ಕಬ್ಬೆ ಬ್ಯಾಂಕ್ ನಲ್ಲಿ ನೇಣಿಗೆ ಶರಣಾದ ವ್ಯಕ್ತಿ.ಇವರು ಮೂಲತಃ ಕೇರಳದ ಆಲಪುಝ್ಝ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕ್ ನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನಾಪೊಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.






