ಇತರೆ

ಬ್ರಹ್ಮಾವರ:ಕಾರು ಡಿಕ್ಕಿಯಾಗಿ ನಿವೃತ್ತ ಬ್ಯಾಂಕ್ ಉದ್ಯೋಗಿ ಸಾವು

Views: 108

ಕನ್ನಡ ಕರಾವಳಿ ಸುದ್ದಿ:  ಬ್ರಹ್ಮಾವರ ಎಸ್.ಎಂ.ಎಸ್. ಬಳಿ ಗುರುವಾರ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾರಕೂರಿನ ಉದಯ ಕುಮಾರ್‌ ಶೆಟ್ಟಿ (62) ಮೃತಪಟ್ಟಿದ್ದಾರೆ.

ಅವರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಉಡುಪಿ ಕಡೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ, ಅನಂತರ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಪರೀಕ್ಷಿಸಿ ಉದಯ ಕುಮಾರ್‌ ಶೆಟ್ಟಿ ಅವರು ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ. ಅವರು ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿಯಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!