ಇತರೆ

ಬ್ರಹ್ಮಾವರ: ಒಣ ಹುಲ್ಲು ಸಾಗಣೆ ಮಾಡುತ್ತಿದ್ದ ಲಾರಿಗೆ ಬೆಂಕಿ

Views: 11

ಕನ್ನಡ ಕರಾವಳಿ ಸುದ್ದಿ: ಒಣ ಹುಲ್ಲು ಸಾಗಣೆ ಮಾಡುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಹುಲ್ಲಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ಆರೂರು ತೆಂಕಬೆಟ್ಟಿನಲ್ಲಿ ಸಂಭವಿಸಿದೆ.

ತೆಂಕಬೆಟ್ಟಿನಿಂದ ಗೋ ಶಾಲೆಗೆ ಹುಲ್ಲು ಸಾಗಿಸಲಾಗುತ್ತಿತ್ತು. ಲಾರಿ ಚಾಲಕ, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ತ್ವರಿತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ದೊಡ್ಡ ಅನಾಹುತ ತಪ್ಪಿದೆ. ಒಣಹುಲ್ಲು ಬಹುತೇಕ ಸುಟ್ಟು ಕರಕಲಾಗಿದ್ದು, ಲಾರಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!