ಇತರೆ
ಬ್ರಹ್ಮಾವರ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ
Views: 149
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೊಬ್ಬರು ಮನೆಯ ಹಾಲ್ ನಲ್ಲಿರುವ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಶರಣಾದವರು ಹರೀಶ್ ಎಂದು ತಿಳಿಯಲಾಗಿದೆ.
ಪ್ರಕರಣದ ವಿವರ: ಪಿರ್ಯಾದಿದಾರರಾದ ಕೀರ್ತನ್ ಕೆ (26),ಬೈಕಾಡಿ ಗ್ರಾಮ, ಬ್ರಹ್ಮಾವರ ಇವರ ತಂದೆ ಹರೀಶ್ (49) ಇವರು ಜೀವನದಲ್ಲಿ ಜೀಗುಪ್ಸೆಹೊಂದಿ ದಿನಾಂಕ 14/07/2026 ರಂದು ಬೆಳಿಗ್ಗೆ 08:15 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯ ಮಧ್ಯಾವಧಿಯಲ್ಲಿ ತನ್ನ ವಾಸದ ಮನೆಯ ಹಾಲ್ ನಲ್ಲಿರುವ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.






