ಶಿಕ್ಷಣ
ಭಾರಿ ಮಳೆ:ಇಂದು (ಅ.28) ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ

Views: 112
ಕನ್ನಡ ಕರಾವಳಿ ಸುದ್ದಿ: ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆ.28ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ರಜೆ ಇರುವುದಿಲ್ಲ, ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.