ಕರಾವಳಿ
ಭಾರಿ ಮಳೆ ಎಚ್ಚರಿಕೆ..! ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 2ರಂದು ಶಾಲೆಗಳಿಗೆ ರಜೆ ಘೋಷಣೆ

Views: 244
ಉಡುಪಿ: ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 02) ಜಿಲ್ಲೆಯ ಪದವಿ ಪೂರ್ವ ಕಾಲೇಜು ವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಮತ್ತು ಐಟಿಐಗಳಿಗೆ ರಜೆ ಘೋಷಿಸಲಾಗಿಲ್ಲ.