ಜನಮನ

ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Views: 52

ಕನ್ನಡ ಕರಾವಳಿ ಸುದ್ದಿ: ರಾಜ್ಯದ ಕೆಲವೆಡೆ ಇಂದಿನಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ.

ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂದೆರೆಡು ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ 24 ರಿಂದ ಉತ್ತರ ಕನ್ನಡ ಜಿಲ್ಲೆಗೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ ,ಧಾರಾವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ,ವಿಜಯನಗರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಉಡುಪಿ ದಕ್ಷಿಣ ಕನ್ನಡ, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ

ಕರಾವಳಿಯಲ್ಲಿ ಜೂನ್‌ 25 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಜೂನ್ 22 ಮತ್ತು 23ರಂದು ತೀವ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Related Articles

Back to top button
error: Content is protected !!