ಕರಾವಳಿ
ಭಾರೀ ಮಳೆ ಹಿನ್ನೆಲೆ, ಅ.18ರಂದು ಉಡುಪಿ ಜಿಲ್ಲೆಯಾದ್ಯಂತ ಪದವಿ ಪೂರ್ವ ಕಾಲೇಜು ವರೆಗೆ ರಜೆ ಘೋಷಣೆ

Views: 77
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:17.08.2025ರ ಹವಾಮಾನ ಇಲಾಖೆಯ ‘ರೆಡ್ ಅಲರ್ಟ್’ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು18.08.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಉಳಿದಂತೆ ಎಲ್ಲಾ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ ಕೆ ಘೋಷಣೆ ಮಾಡಿದ್ದಾರೆ.