ಇತರೆ

ಭೀಕರ ಅಪಘಾತ:ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ, ನಾಲ್ವರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ದುರ್ಮರಣ

Views: 131

ಕನ್ನಡ ಕರಾವಳಿ ಸುದ್ದಿ: ತುಮಕೂರು ತಾಲೂಕು ಕೋರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ಕು ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ದುರ್ಮರಣ ಹೊಂದಿದ್ದಾರೆ. 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಎಲ್ಲರೂ ಕೊಪ್ಪಳ ಜಿಲ್ಲೆಯ ಕುಕನೂರು ನಿವಾಸಿಗಳು.ಗಾಯಗೊಂಡ ಶ್ರೀನಿವಾಸ್, (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಹುಲಿಗಪ್ಪ (32), ರಾಕೇಶ್ (24), ತಿರುಪತಿ (33), ಶ್ರೀನಿವಾಸ್, (32) ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಿನ ಜಾವ 4.45ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ನಿಂತಿದ್ದ ಲಾರಿಗೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಹಿನ್ನೆಲೆ ಈ ಅಪಘಾತ ಸಂಭವಿಸಿದೆ.

ಮೃತರೆಲ್ಲಾ ಕೊಪ್ಪಳ ಮೂಲದವರಾಗಿದ್ದಾರೆ. ಇವರು ಅಯ್ಯಪ್ಪ ಮಾಲೆ ಧರಿಸಿದ್ದು, ಶಬರಿಮಲೆಗೆ ಹೊರಟಿದ್ದರು ಎಂದು ಊಹಿಸಲಾಗಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related Articles

Back to top button
error: Content is protected !!