ಸಾಂಸ್ಕೃತಿಕ

ಭೀಕರ ಅಪಘಾತ: ಕನ್ನಡ ಕಿರುತೆರೆ ಹಾಗೂ ಸಿನಿಮಾ ನಟ ಹರೀಶ್ ಸಾವು 

Views: 148

ಕನ್ನಡ ಕರಾವಳಿ ಸುದ್ದಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನ್ನಡ ಕಿರುತೆರೆ ಹಾಗೂ ಸಿನಿಮಾ ನಟ ಹರೀಶ್ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ಈ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಬಳಿ ಭೀಕರ ಅಪಘಾತದಲ್ಲಿ ನಟ ಹರೀಶ್ ಸಾವನ್ನಪ್ಪಿದ್ದಾರೆ.

ಕೆಲಸ ಮುಗಿಸಿ ಕುಶಾಲನಗರದಿಂದ ತಮ್ಮ ಸ್ವಗ್ರಾಮಕ್ಕೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಹರೀಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಹರೀಶ್ ಬಹುಮುಖ ಪ್ರತಿಭೆ. ವೃತ್ತಿಜೀವನದ ಜೊತೆಗೆ ಸಿನಿಮಾ, ಧರಾವಾಹಿಗಳಲ್ಲಿಯೂ ಅಭಿನಯಿಸುತ್ತಿದ್ದರು. ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!