ಇತರೆ

ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾವು

Views: 68

ಕನ್ನಡ ಕರಾವಳಿ ಸುದ್ದಿ: ಬಿ.ಸಿ.ರೋಡಿನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಇಬ್ಬರೂ ಸವಾರರು ಮೃತಪಟ್ಟಿದ್ದಾರೆ.

ದಯಾನಂದ (52) ಮತ್ತು ಸಹಸವಾರ ಯಶವಂತ ಕುಲಾಲ್ (42) ಮೃತಪಟ್ಟವರು.

ಗುರುವಾರ ಸಂಜೆ 6.30ರ ವೇಳೆಗೆ ಮೆಲ್ಕಾರ್ ಕಡೆಯಿಂದ ಲೊರೆಟ್ಟೆ ಕಡೆಗೆ ಬರುತ್ತಿದ್ದ ಟಿಪ್ಪರ್ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಸ್ಕೂಟರ್‌ಗೆ ಢಿಕ್ಕಿಯಾಗಿತ್ತು. ಸ್ಕೂಟರ್‌ನಲ್ಲಿದ್ದ ಸವಾರ ದಯಾನಂದ ಹಾಗೂ ಸಹಸವಾರ ಯಶವಂತ ಕುಲಾಲ್ ಯಶವಂತ ಅವರು ಗಂಭೀರವಾಗಿ ಗಾಯಗೊಂಡರು. ಯಶವಂತ ಅವರನ್ನು ಚಿಕಿತ್ಸೆಗಾಗಿ ಕೂಡಲೇ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ದಯಾನಂದ ಅವರನ್ನುಸಹ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕೂಡ ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟರು.

ಆರೋಪಿ ಟಿಪ್ಪರ್ ಚಾಲಕ ಸಲ್ಮಾನ್ ಫಾರುಕ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Related Articles

Back to top button
error: Content is protected !!