ಯುವಜನ

ಭೀಕರ ಅಪಘಾತ: ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ಮೂವರು SSLC, PUC ವಿದ್ಯಾರ್ಥಿಗಳು ದಾರುಣ ಸಾವು

Views: 185

ಚಿಕ್ಕಬಳ್ಳಾಪುರ: ಒಳ್ಳೆಯ ಭವಿಷ್ಯ ಕಟ್ಟಿಕೊಳ್ಳಬೇಕು ಅನ್ನೋ ಕನಸು ಕಾಣುತ್ತಿದ್ದ ಮೂವರು SSLC, PUC ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಹಾಗೂ ಬೈಕ್‌ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಒಂದೇ ಊರಿನ  ವಿದ್ಯಾರ್ಥಿಗಳು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಭೀಕರ ಅಪಘಾತದಲ್ಲಿ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಮೂವರನ್ನು ವೈಭವ್, ನಿತೀಶ್ (17) ಹಾಗೂ ನಿತೀನ್ (17) ಎಂದು ಗುರುತಿಸಲಾಗಿದೆ.

ಈ ಮೂವರು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ವಿದ್ಯಾರ್ಥಿಗಳು. ನಿತೀಶ್ ಹಾಗೂ ನಿತಿನ್ ಬಿಜಿಎಸ್ ಶಾಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ವೈಭವ್‌ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದರು.

ಎಂದಿನಂತೆ ಇವರು ಶಾಲೆ ಹಾಗೂ ಕಾಲೇಜು ಮುಗಿದ ಬಳಿಕ ಟ್ಯೂಷನ್‌ಗೆ ಹೋಗಿದ್ದರು. ಟ್ಯೂಷನ್ ಮುಗಿಸಿಕೊಂಡು ಮೂವರು ಒಂದೇ ಬೈಕಿನಲ್ಲಿ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!