ಇತರೆ
ಭೀಕರ ಕಾರು ಅಪಘಾತ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು
Views: 95
ಕನ್ನಡ ಕರಾವಳಿ ಸುದ್ದಿ: ಕಲಬುರಗಿ ಬಳಿ ಸಂಭವಿಸಿದ್ದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಅವರ ಇಬ್ಬರು ಸ್ನೇಹಿತರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಖನಿಜ ನಿಗಮದ ಎಂಡಿಯಾಗಿದ್ದ ಮಹಾಂತೇಶ್ ಬೀಳಗಿ ಸೇರಿ ಐವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಲಬುರಗಿಯ ಜೇವರ್ಗಿ ಬೈಪಾಸ್ ಬಳಿ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಅಪಘಾಅದಲ್ಲಿ ಮಹಾಂತೇಸ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದರು. ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗಾಯಾಳು ಸ್ನೇಹಿತ ಕೂಡ ಕೊನೆಯುಸಿರೆಳೆದಿದ್ದಾರೆ. ಇನ್ನೋರ್ವ ಗಾಯಾಳು ಸಹ ಸಾವನಪ್ಪಿದ್ದಾರೆ.






