ಯುವಜನ
ಭೀಕರ ರಸ್ತೆ ಅಪಘಾತ:ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ಸಾವು.
Views: 43
ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ.
ಯಲಹಂಕ-ರಾಜಾನುಕುಂಟೆ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಕೃಷಾಂತ್ ಮತ್ತು ಪ್ರದೀಪ್ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರೂ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುತ್ತಾಡಲು ಎಂದು ಬೈಕ್‌ನಲ್ಲಿ ತೆರಳಿದ್ದ ವೇಳೆ,ರಾಯಲ್ ಎನ್‌ಫೀಲ್ಡ್ ಬೈಕ್ ಅಂಗಡಿಯ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






