ಶಿಕ್ಷಣ
ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
Views: 19
ಕನ್ನಡ ಕರಾವಳಿ ಸುದ್ದಿ: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ರಾತ್ರಿ ಸುಮಾರು 11.40ರ ವೇಳೆಗೆ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಸಮೀಪದ ಪನಂಬಿಕುನ್ನು ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಅತಿವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರೆಲ್ಲರೂ ನೆರೆಯ ರಾಜ್ಯ ತಮಿಳುನಾಡಿನ ವಿದ್ಯಾರ್ಥಿಗಳು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಅಪಘಾತದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.






