ಯುವಜನ

ಮಂಗಳೂರು:ಬಿಹಾರ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Views: 250

ಕನ್ನಡ ಕರಾವಳಿ ಸುದ್ದಿ: ಬಿಹಾರ ಮೂಲದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತ ಯುವತಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ನಿನ್ನೆ(ಮಾ.16) ಮೈಪೂರ್ತಿ ಗಾಯವಾಗಿದ್ದ ಯುವತಿ ತಡರಾತ್ರಿ ವೇಳೆ ಸ್ಥಳೀಯರೊಬ್ಬರ ಮನೆ ಬಾಗಿಲು ಬಡಿದಿದ್ದಾಳೆ. ನೀರು ಕೇಳುತ್ತಿದ್ದಂತೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಮನೆಮಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಯುವತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶವೊಂದರಲ್ಲಿ ಇರುವ ಮನೆಗೆ ನಿತ್ಯ ಗಾಂಜಾ ವ್ಯಸನಿಗಳು ಬರುತ್ತಿದ್ದು ನಿನ್ನೆಯೂ ನಾಲ್ವರು ಅಲ್ಲಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಯುವತಿ ಮನೆಯೊಂದರ ಬಾಗಿಲು ತಟ್ಟುತ್ತಿದ್ದಂತೆ ಯುವಕರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ಯುವತಿಯನ್ನು ವಿಚಾರಣೆ ನಡೆಸಬೇಕಾಗಿದೆ. ಸ್ಥಳಕ್ಕೆ ಪೊಲೀಸ್ ಕಮೀಷನ‌ರ್ ಅನುಪಮ್ ಅಗರವಾಲ್ ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

Related Articles

Back to top button