ಕ್ರೀಡೆ
ಮಂಗಳೂರು : ಗೆಳೆಯರ ಜೊತೆ ಆಡುತ್ತಿದ್ದ ವೇಳೆ ಬ್ಯಾಡ್ಮಿಂಟನ್ ಕೋರ್ಟ್ನಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು

Views: 101
ಕನ್ನಡ ಕರಾವಳಿ ಸುದ್ದಿ: ಗೆಳೆಯರ ಜೊತೆ ಆಡುತ್ತಿದ್ದ ವೇಳೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳೂರಿನ ಫಳ್ನೀರ್ನಲ್ಲಿ ನಡೆದಿದೆ.
ಅಡ್ಡೂರಿನ ನಿವಾಸಿ ಶಹೀಮ್ (20) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದ ಶಹೀಮ್ ಗೆಳೆಯರೊಂದಿಗೆ ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಕೋರ್ಟ್ನಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.






