ಇತರೆ

ಮಂಗಳೂರು: ತನ್ನೂರಿನಲ್ಲೇ ಓದು ಮುಂದುವರಿಯಲು ಹಠ ಹಿಡಿದಿದ್ದ ಅಪ್ರಾಪ್ತ ಬಾಲಕಿ ನೇಣುಬಿಗಿದು ಆತ್ಮಹತ್ಯೆ

Views: 159

ಉಳ್ಳಾಲ :ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ.

ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ ಬಾಲಕಿ

ತೊಕ್ಕೊಟ್ಟು ವೃಂದಾವನ ಹೊಟೇಲ್ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನು ಮಂಗಳೂರಿನಲ್ಲೆ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು. ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸುವುದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ.

ಶನಿವಾರ ಮದ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನು ಶಾಲೆಯಿಂದ ಮನೆಗೆ ಕರಕೊಂಡು ಬರುವ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲನ್ನು  ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ವೇಳೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

 

Related Articles

Back to top button
error: Content is protected !!