ಕರಾವಳಿ

ಮಂಗಳೂರು ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಮಾಜಿ ಪ್ರೇಯಸಿ ಎಂಟ್ರಿ 

Views: 255

ಮಂಗಳೂರು: ಬೇರೊಬ್ಬಳೊಂದಿಗೆ ಮದುವೆಯಾಗುತ್ತಿದ್ದಾಗ ಕಲ್ಯಾಣ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟ ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ.

ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಅವಾಂತರ ನಡೆದಿದೆ.

ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು.ನಂತರ ಆತ ವರಸೆ ಬದಲಾಯಿಸಿದ್ದಾನೆ. ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್​ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್​ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್​ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ.

ಯುವತಿಯನ್ನು ಕರೆದೊಯ್ದ ಪೊಲೀಸರು, ಮಂಗಳೂರು ಯುವತಿಗೆ ತಾಳಿ ಕಟ್ಟಿದ ಅಕ್ಷಯ್

ನಂತರ ಪೊಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ.

Related Articles

Back to top button
error: Content is protected !!