ಮಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಬಂಧನ

Views: 115
ಮಂಗಳೂರು: ಸಂಚರಿಸುತ್ತಿದ್ದ ಬಸ್‌ನಲ್ಲಿಯೇ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್‌ನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಂಡಕ್ಟರ್ ಪ್ರದೀಪ್ ಕಾಶಪ್ಪ ನಾಯ್ಕರ್ ಆರೋಪಿ. ಉಳ್ಳಾಲ ಮುಡಿಪು ರೂಟ್ ಬಸ್ಸಿನಲ್ಲಿ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿತ್ತು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ತೂಕಡಿಸುತ್ತಿದ್ದಳು. ಈ ವೇಳೆ ಆಕೆಗೆ ಅರಿವಿಲ್ಲದಂತೆ ಕಂಡಕ್ಟರ್ ಪ್ರದೀಪ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕೃತ್ಯವನ್ನು ಪ್ರಯಾಣಿಕರು ವೀಡಿಯೋ ಮಾಡಿದ್ದರು. ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಮಂಗಳೂರು ಕೆಎಸ್ಆರ್‌ಟಿಸಿ ಡಿಸಿ ರಾಜೇಶ್ ಶೆಟ್ಟಿ ಅವರು ಬಸ್ ಕಂಡಕ್ಟರ್ ಪ್ರದೀಪ್‌ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, “ಸಾಮಾಜಿಕ ಮಾಧ್ಯಮದಲ್ಲಿ ಬಸ್ ಕಂಡಕ್ಟರ್‌ವೋರ್ವ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವ ವೀಡಿಯೊಗೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರಂತೆ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ಪ್ರದೀಪ್ ಕಾಶಪ್ಪ ನಾಯ್ಕರ್ನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.