ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ 1.179 ಕೆ.ಜಿ. ಚಿನ್ನ ವಶ

Views: 0

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 70,02,568 ರೂಪಾಯಿ ಮೌಲ್ಯದ 1.179 ಕೆ.ಜಿ. ತೂಕದ ಚಿನ್ನದ ವಸ್ತುಗಳನ್ನು ಪತ್ತೆ ಮಾಡಿದ್ದಾರೆ.

ಕಳೆದ ವಾರ ಇಂಡಿಗೋ ವಿಮಾನ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮೂಲಕ ದುಬಾಯಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರನ್ನು ಪರಿಶೀಲನೆಗೆ ಒಳ ಪಡಿಸಿದಾಗ ಈ ಅಕ್ರಮ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಒಬ್ಬನ ಬಳಿ ಚಿನ್ನವನ್ನು ಟ್ರಾಲಿ ಬ್ಯಾಗ್‌ನಲ್ಲಿ ಮಣಿ ಹಾಕುವ ರಾಡ್‌ಗಳ ರೂಪದಲ್ಲಿ, ಮಣಿಕಟ್ಟಿನ ಗಡಿಯಾರ, ಬಾಲ್- ಪಾಯಿಂಟ್ ಪೆನ್, ಹೇರ್ ಟ್ರಿಮ್ಮರ್, ಸ್ಟೀಲ್ ವೂಲ್ ಸ್ಕ್ರಬರ್ ಮತ್ತು ಒಂದು ರೋಡಿಯಂ ಲೇಪಿತ ನಾಣ್ಯ ಸೇರಿದಂತೆ ಒಟ್ಟು 322 ಗ್ರಾಂ ತೂಕದ 18,17,718 ರೂ ಮೌಲ್ಯದ ವಸ್ತುಗಳು ಪತ್ತೆಯಾಗಿವೆ.

ಇನ್ನೊಂದು ಪ್ರಕರಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬಾಯಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಚೆಕ್- ಇನ್ ಬ್ಯಾಗೇಜ್ ಸ್ಕ್ಯಾನ್ ಮಾಡುವಾಗ, ಕೆಲವು ಕಪ್ಪು ಚಿತ್ರಗಳು ಮತ್ತು ಭಾರೀ ಲೋಹದ ಇರುವಿಕೆಯನ್ನು ಸೂಚಿಸುವ ವಸ್ತುಗಳು ಕಂಡು ಬಂದಿವೆ. ಪರಿಶೀಲನೆ ನಡೆಸಿದಾಗ ಎರಡು ಕಾರ್ ಸ್ಪೀಕರ್‌ ಗಳಲ್ಲಿ 2 ವೃತ್ತಾಕಾರದ ತುಂಡುಗಳು, ಏರ್‌ಪಾಡ್‌ ನಲ್ಲಿ 2 ಆಯತಾಕಾರದ ಕಟ್ ತುಂಡುಗಳು ಮತ್ತು ಪವರ್ ಅಡಾಪ್ಟರ್‌ ನಲ್ಲಿ ಒಂದು ಆಯತಾಕಾರದ ತುಂಡು ಚಿನ್ನ ಸೇರಿದಂತೆ ಒಟ್ಟು 51,84,850 ರೂ. ಮೌಲ್ಯದ 857 ಗ್ರಾಂ 24 ಕ್ಯಾರೆಟ್ ಶುದ್ಧತೆಯ ಚಿನ್ನ ಪತ್ತೆಯಾಗಿದ್ದು, ಅದನ್ನು ವಶಪಡಿಸಿ ಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ.

Related Articles

Back to top button
error: Content is protected !!