ಜನಮನ

ಮಂಗಳೂರು: ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Views: 0

ಮಂಗಳೂರು:ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿಯ ಪ್ರಕೃತಿ ಶೆಟ್ಟಿ(20) ಎನ್ನಲಾಗಿದೆ.

ನಸುಕಿನ ವೇಳೆ ಮೂರು ಗಂಟೆ ವೇಳೆಗೆ ಈಕೆ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಾನು ದಪ್ಪಗಿದ್ದೇನೆ. ಎಂಬ ಕೀಳರಿಮೆಯಿಂದ  ಬೇಸತ್ತು ಮಾನಸಿಕ ಖಿನ್ನತೆಗೊಳಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!