ರಾಜಕೀಯ

ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಬೇಕೆಂದು ಕುಂದಾಪುರ ಯೂತ್ ಕಾಂಗ್ರೆಸ್ ಒತ್ತಾಯ

Views: 65

ಕನ್ನಡ ಕರಾವಳಿ ಸುದ್ದಿ:ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಬೇಕೆಂದು ಕುಂದಾಪುರ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಂದಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ, ಮಂಜುನಾಥ ಭಂಡಾರಿ ಅವರು ಕಳೆದ 40 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿಧಾನಪರಿಷತ್‌ ಸದಸ್ಯರಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಎರಡು ಜಿಲ್ಲೆಗಳ 13 ಕ್ಷೇತ್ರದಲ್ಲಿ ನಿರಂತರ ಸಂಚಾರ ಮಾಡುತ್ತಿದ್ದಾರೆ.ರಾಜ್ಯದ ವಿವಿಧ ಮಂತ್ರಿಗಳೊಂದಿಗೆ ಅವರು ನಿಕಟ ಸಂಪರ್ಕ ಹೊಂದಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿಧಾನಪರಿಷತ್‌ ಸದಸ್ಯರಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಎರಡು ಜಿಲ್ಲೆಗಳ 13 ಕ್ಷೇತ್ರದಲ್ಲಿ ನಿರಂತರ ಸಂಚಾರ ಮಾಡುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಯೂತ್ ಕಾಂಗ್ರೆಸ್‌ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮಹಮ್ಮದ್ ಸಲಾಂ, ನಟರಾಜ್ ಹೊಳ್ಳ, ಅಭಿಜಿತ್ ಪೂಜಾರಿ, ಮುನಾಫ್ ಕೋಡಿ ಹಾಗೂ ರಕ್ಷತ್ ಶೆಟ್ಟಿ ಉಪಸ್ಥಿತರಿದ್ದರು.

 

 

Related Articles

Back to top button
error: Content is protected !!