ಆರೋಗ್ಯ

ಮಂಡ್ಯ ಆರೋಗ್ಯ ಇಲಾಖೆಯ ವಸತಿ ಗೃಹದಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ದಂಧೆ: ಮೂವರ ಬಂಧನ

Views: 20

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

ಪಾಂಡವಪುರದ ಆರೋಗ್ಯ ಇಲಾಖೆಯ ವಸತಿ ಗೃಹದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ದಂಧೆ ನಡೆಯುತ್ತಿದ್ದ ಬಗ್ಗೆ ಆಘಾತಕಾರಿ ಮಾಹಿತಿ ಬಯಲಾಗಿದೆ.

ವರದಿಗಳ ಪ್ರಕಾರ, ಭಾನುವಾರ ರಾತ್ರಿ ಪಾಂಡವಪುರದ ಆರೋಗ್ಯ ಇಲಾಖೆಯ ವಸತಿ ಗೃಹದ ಮೇಲೆ ಜಂಟಿ ದಾಳಿ ನಡೆಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಅರವಿಂದ್ ಮತ್ತು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ದುಷ್ಕೃತ್ಯಕ್ಕೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ಜಪ್ತಿ ಮಾಡಿದ್ದಾರೆ. ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಿಸಿದ್ದಾರೆ.

ಪಾಂಡವಪುರ ತಾಲೂಕು ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಆನಂದ್, ಅದೇ ಆಸ್ಪತ್ರೆಯ ಹೊರಗುತ್ತಿಗೆ ಡಿ ದರ್ಜೆ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬರು ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Related Articles

Back to top button