ಇತರೆ

ಮಂತ್ರಾಲಯಕ್ಕೆ ಹೊರಟ್ಟಿದ್ದ ಕಾರು ಅಪಘಾತ:ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

Views: 42

ಕನ್ನಡ ಕರಾವಳಿ ಸುದ್ದಿ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು (ಡಿವೈಡರ್) ದಾಟಿ ಎದುರಿನಿಂದ ಬರುತ್ತಿದ್ದ ಓಮ್ಮಿ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಓಮ್ಮಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು

ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಧಾವಿಸಿ, ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!