ಇತರೆ

ಮಗಳನ್ನು ಕೊಂದು ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ 

Views: 433

ಕನ್ನಡ ಕರಾವಳಿ ಸುದ್ದಿ: ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ಮಗಳನ್ನು ಕೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

6ನೇ ತರಗತಿ ಓದುತ್ತಿದ್ದ ಬಾಲಕಿ ಪೂರ್ವಿಕಾಳನ್ನು ಕೊಲೆಗೈದ ತಾಯಿ ಶೃತಿ (35) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶೃತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು, ಮೆಗ್ಗಾನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅವರ ಪತಿ ರಾಮಣ್ಣ ನಿನ್ನೆ ರಾತ್ರಿ ಪಾಳಯದ ಕರ್ತವ್ಯದಲ್ಲಿದ್ದರು.

ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿದ ಶೃತಿ ಮೊದಲಿಗೆ ಮಗಳನ್ನು ಮಚ್ಚಿನಿಂದ ಹೊಡೆದು ಕೊಂದಿದ್ದಾಳೆ. ಬಳಿಕ ಆಕೆಯ ಮೃತದೇಹದ ಮೇಲೆ ನಿಂತುಕೊಂಡ ಪ್ಯಾನ್‌ಗೆ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪತಿ ರಾತ್ರಿ ಕೆಲಸ ಮುಗಿಸಿಕೊಂಡು ಬೆಳಗ್ಗೆ ಕ್ವಾಟ್ರಸ್‌ಗೆ ಬಂದಾಗ ವಿಷಯ ತಿಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!