ಯುವಜನ

ಮಣಿಪಾಲ ಜನನಿ ಬಾರ್‌ ಬಳಿ ಯುವಕನ ಮೇಲೆ ಹಲ್ಲೆ : ನಿಟ್ಟೆ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಬಂಧನ 

Views: 52

ಕನ್ನಡ ಕರಾವಳಿ ಸುದ್ದಿ: ಮಣಿಪಾಲ ಜನನಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿಟ್ಟೆಯ ಎಂಜಿನಿಯರಿಂಗ್‌ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಜುಲೈ 23ರಂದು ರಾತ್ರಿ 11.50ರ ಸುಮಾರಿಗೆ ಯಶ್‌ರಾಜ್ ಅವರು ತಮ್ಮ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ಅವರೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆರೋಪಿಗಳಾದ ಅಕ್ಷಯ್ ಎ, ಪುನೀತ್ ಎಸ್, ಮಂತ್ ಕೆ.ಆರ್. ಹಾಗೂ ಯಶವಂತ್ ಬಿ.ಜೆ. ಅವರು ಎರಡು ಕಾರುಗಳಲ್ಲಿ ಬಂದು ಪವನ್ ಕುಮಾರ್ ಅವರನ್ನು ತಡೆದಿದ್ದಾರೆ. ಬಳಿಕ ಯಾವುದೇ ಕಾರಣವಿಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈ ಹಾಗೂ ಕಾಲಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯ ವೇಳೆ ಮೆಟಲ್ ಪಂಚ್‌ನಿಂದ ಪವನ್ ಕುಮಾರ್ ಅವರ ಮುಖಕ್ಕೆ ಹೊಡೆದು ಮೂಗಿಗೆ ಗಂಭೀರ ಗಾಯಪಡಿಸಿದ್ದು, ಯಶ್‌ರಾಜ್ ಹಾಗೂ ಶ್ರೇಯಸ್ ಅವರ ಮೇಲೂ ಹಲ್ಲೆ ನಡೆಸಿ, ಬಟ್ಟೆ ಹರಿದು ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದರು.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಿಸಲಾಗಿತ್ತು

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related Articles

Back to top button
error: Content is protected !!