ಜನಮನ
ಮಣಿಪುರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ – ಮೂವರು ಆದಿವಾಸಿಗಳ ಹತ್ಯೆ

Views: 0
ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ಪೋಕಿ ಜಿಲ್ಲೆಯಲ್ಲಿ ನಿಷೇಧಿತ ಭಯೋತ್ಪಾದಕ ಗುಂಪುಗಳು ಮಂಗಳವಾರ ಬೆಳಗ್ಗೆ ಕುಕಿ-ಜೋ ಸಮುದಾಯಕ್ಕೆ ಸೇರಿದ ಮೂವರು ಆದಿವಾಸಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಷೇಧಿತ ಭಯೋತ್ಪಾದಕರು ಇಂಫಾಲ ಮತ್ತು ಕಾಂಗ್ಪೋಕಿ ಜಿಲ್ಲೆಗಳ ಗಡಿಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ಗ್ರಾಮಸ್ಥರ ಮೇಲೆ ದಾಳಿ ನಡೆಸಿ ಮೂವರನ್ನು ಹತ್ಯೆಗೈದಿದ್ದಾರೆ ಎಂದು ವರದಿಗಳು ತಿಳಿಸಿವೆ.






