ಇತರೆ

ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 2 ಕೋಟಿ ಹಣ,16 ಲಕ್ಷ ರೂ.ಮದ್ಯ ವಶ

Views: 66

ಹುಬ್ಬಳ್ಳಿ,ಐಟಿ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ಹಿನ್ನೆಲೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಮನೆಯಲ್ಲಿ ಬರೋಬ್ಬರಿ 2 ಕೋಟಿ ರೂ. ಗೂ ಹೆಚ್ಚು ನಗದು ಜಪ್ತಿ ಮಾಡಲಾಗಿದೆ. ನಿಂಗಪ್ಪ ಜಟಾದ್ ಎಂಬುವವರ ಮನೆಯಲ್ಲಿ ಮತದಾರರಿಗೆ ಹಂಚಲು 2 ಕೋಟಿ ರೂ. ಹೆಚ್ಚು ನಗದು ಸಂಗ್ರಹಿಸಲಾಗಿತ್ತು ಎನ್ನಲಾಗಿದ್ದು, ಈ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಚುನಾವಣಾ ನೀತಿ ಸಂಹಿತೆ ಹಾಗೂ ಅಬಕಾರಿ ನಿಯಮ ಉಲ್ಲಂಸಿದ ಹಿನ್ನೆಲೆಯಲ್ಲಿ ಲಾರಿಯಲ್ಲಿದ್ದ 16 ಲಕ್ಷ ರೂ. ಮೌಲ್ಯದ 9420 ಲೀಟರ್ ಬಿಯರ್ ಜಪ್ತಿ ಮಾಡಲಾಗಿದೆ. ಕೆಎಸ್ಬಿಸಿಎಲ್ ಡೀಪೊದಲ್ಲಿ ಲಾರಿಯೊಂದರಲ್ಲಿ ಇದ್ದ 650/500 ಎಂಎಲ್ನ 1100 ಬಿಯರ್ ಬಾಕ್ಸ್ಗಳನ್ನು ವಶಕ್ಕೆ ಪಡೆಯಲಾಗಿದೆ.

 

Related Articles

Back to top button
error: Content is protected !!