ಜನಮನ

ಮತ್ತೆ ಮಳೆರಾಯ ಎಂಟ್ರಿ: ಕರಾವಳಿ,ದಕ್ಷಿಣ ಒಳನಾಡು ಈ ಜಿಲ್ಲೆಗಳಿಗೆ ಹೈ ಅಲರ್ಟ್‌ ಘೋಷಣೆ!

Views: 150

ಕನ್ನಡ ಕರಾವಳಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ (ಏ. 26,) ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡು, ಕರಾವಳಿ, ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ವಿಭಿನ್ನ ಎಚ್ಚರಿಕೆಗಳನ್ನು ಘೋಷಿಸಲಾಗಿದ್ದು, ಜನರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡು ಪ್ರದೇಶದ ಜಿಲ್ಲೆಗಳಾದ ಬೀದ‌ರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಮತ್ತು ಕೊಪ್ಪಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಈ ಜಿಲ್ಲೆಗಳಲ್ಲಿ ಗಂಟೆಗೆ 30-50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಈ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ವಿಜಯನಗರ, ದಾವಣಗೆರೆ, ಹಾಸನ, ತುಮಕೂರು, ಮೈಸೂರು, ಮತ್ತು ಮಂಡ್ಯಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button
error: Content is protected !!