ಶಿಕ್ಷಣ

ಮದರ್ ತೆರೇಸಾ ಪದವಿ ಪೂರ್ವ ಕಾಲೇಜು:ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Views: 104

ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಕಲೆ ಹಾಗೂ ಸಾಹಿತ್ಯಾಸಕ್ತಿ ಬೆಳೆಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಕೆಂಪೇಗೌಡರ ಜನ್ಮದಿನದ ಪ್ರಯುಕ್ತ ಜೂನ್ 24 ರಂದು ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ರಕ್ಷಿತಾ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ ದ್ವಿತೀಯ ಸ್ಥಾನವನ್ನು, ಪ್ರತಿಕ್ಷ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ, ಸಮಾಧಾನಕರ ಬಹುಮಾನವನ್ನು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವರ್ಷಿಣಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಸಮಾಧಾನಕರ ಬಹುಮಾನವನ್ನು ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಸಾಂಸ್ಕೃತಿಕವಾಗಿ ಸಂಸ್ಥೆಯ ಕೀರ್ತಿಯನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ದ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Related Articles

Back to top button