ಶಿಕ್ಷಣ

ಮದರ್ ತೆರೇಸಾ ಪಿಯು ಕಾಲೇಜಿನಲ್ಲಿ ಅಮಾಸೆಬೈಲು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ರ‍್ಯಾಂಕ್ 

Views: 6

ಕನ್ನಡ ಕರಾವಳಿ ಸುದ್ದಿ: ಅಮಾವಾಸೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳು, ನಂತರ ಪಿಯುಸಿ ವಿದ್ಯಾಭ್ಯಾಸಕ್ಕೆ ಮದರ್ ತೆರೆಸಾ ಪದವಿ ಪೂರ್ವ ಕಾಲೇಜನ್ನು ಆಯ್ಕೆ ಮಾಡಿಕೊಂಡು, ದ್ವಿತೀಯ ಪಿಯುಸಿಯಲ್ಲಿ ರಾಜ್ಯಮಟ್ಟದ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

2025–26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿದ್ದು, , ರಿಷಿತಾ ಮತ್ತು ಕ್ಷಮಾ 593ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್, ಪ್ರಗತಿ 591 ಅಂಕಗಳೊಂದಿಗೆ 10ನೇ ರ್‍ಯಾಂಕ್, ರಾಶಿ 590 ಅಂಕಗಳೊಂದಿಗೆ 11 ನೇ ರಾಂಕ್ ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆ, ಗ್ರಾಮೀಣ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳಿಗೂ ಉತ್ತಮ ಅವಕಾಶ ಮತ್ತು ಮಾರ್ಗದರ್ಶನ ದೊರೆತರೆ ಎತ್ತರದ ಸಾಧನೆ ಸಾಧ್ಯವೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಅಮಾವಾಸೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದ ಈ ವಿದ್ಯಾರ್ಥಿಗಳು, ಪದವಿ ಪೂರ್ವ ಹಂತದಲ್ಲಿ ಮದರ್ ತೆರೆಸಾ ಪಿಯು ಕಾಲೇಜಿನ ಶೈಕ್ಷಣಿಕ ವಾತಾವರಣ ಮತ್ತು ಗುಣಮಟ್ಟದ ಮಾರ್ಗದರ್ಶನದಿಂದ ತಮ್ಮ ಪ್ರತಿಭೆಯನ್ನು ಇನ್ನಷ್ಟು ತೀಕ್ಷ್ಣಗೊಳಿಸಿಕೊಂಡು ಈ ಯಶಸ್ಸನ್ನು ಸಾಧಿಸಿದ್ದಾರೆ.

ಈ ಸಾಧನೆಗೆ ಎರಡು ಸಂಸ್ಥೆಗಳ ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದ್ದು, ಇತರ ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Related Articles

Back to top button
error: Content is protected !!