ಮದರ್ ತೆರೇಸಾ ಮೌಲ್ಯಾಧಾರಿತ ಪರಿಪೂರ್ಣ ಶಿಕ್ಷಣದ ವಿದ್ಯಾಕೇಂದ್ರ- ಪತ್ರಕರ್ತ ಜಾನ್ ಡಿ’ಸೋಜ
Views: 217
ಕನ್ನಡ ಕರಾವಳಿ ಸುದ್ದಿ: ಮದರ್ ತೆರೆಸಾ ಶಾಲೆ ಶಂಕರನಾರಾಯಣದಲ್ಲಿ ಹೈಸ್ಕೂಲ್ ವಿಭಾಗದ ವಾರ್ಷಿಕ ಬಹುಮಾನ ವಿತರಣೆ ಕಾರ್ಯಕ್ರಮದ ಅಂಗವಾಗಿ *ಅಭ್ಯುದಯ – 2025* ವೈವಿಧ್ಯಮಯ ಕಾರ್ಯಕ್ರಮವನ್ನು ಡಿಸೆಂಬರ್ 2೦, 2025ರಂದು ಸಂಭ್ರಮ ಹಾಗೂ ಸಡಗರದಿಂದ ಹಮ್ಮಿಕೊಳ್ಳಲಾಯಿತು.
ಉಡುಪಿ ಜಿಲ್ಲಾ ಮಾಜಿ ವಿದ್ಯಾಂಗ ಉಪ ನಿರ್ದೇಶಕರಾದ ಶ್ರೀಯುತ ದಿವಾಕರ ಶೆಟ್ಟಿ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ಖ್ಯಾತ ಹಿರಿಯ ಪತ್ರಕರ್ತರಾದ ಶ್ರೀಯುತ ಜಾನ್ ಡಿ ಸೋಜ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು.
ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ಶಮಿತಾ ರಾವ್ ಹಾಗೂ ಕುಮಾರಿ ರೆನಿಟಾ ಲೋಬೋ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ,ಉಪಮುಖ್ಯೋಪಾಧ್ಯಾಯರಾದ ಶ್ರೀಯುತ ಸಂತೋಷ್ ಕುಮಾರ್ ಶೆಟ್ಟಿ, ವಿದ್ಯಾರ್ಥಿ ನಾಯಕ ಪ್ರೀತಮ್ ಜಿ, ವಿದ್ಯಾರ್ಥಿ ನಾಯಕಿ ಮಾನ್ವಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು . ವಿದ್ಯಾರ್ಥಿಗಳ ಪ್ರಾರ್ಥನೆ ಮತ್ತು ಸ್ವಾಗತ ನೃತ್ಯದ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ನಂತರ ವೇದಿಕೆ ಮೇಲಿನ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.ವಿದ್ಯಾರ್ಥಿ ಪರಿಷತ್ ಸದಸ್ಯರು ಸಾಂಸ್ಕೃತಿಕ ಮತ್ತು ಕ್ರೀಡಾ ವರದಿಯನ್ನು ವಾಚಿಸಿದರು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಹೈಸ್ಕೂಲ್ ವಿಭಾಗದ ಕ್ರೀಡೆ, ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿ ಪ್ರೀತಮ್ ಜಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಯುತ ದಿವಾಕರ ಶೆಟ್ಟಿ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳು ಶಾಲಾ ದಿನಗಳಲ್ಲಿ ಶಿಸ್ತು ಬದ್ಧ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಉತ್ತಮ ಗುರಿಯನ್ನು ಇರಿಸಿಕೊಂಡು ಶ್ರದ್ಧೆಯಿಂದ ಅಧ್ಯಯನ ಮಾಡಿ ಬದುಕಿನಲ್ಲಿ ಪ್ರಗತಿ ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಪ್ರಸಿದ್ಧ ಪತ್ರಕರ್ತ ಜಾನ್ ಡಿಸೋಜ ಅವರು ಮಾತನಾಡಿ ಒಂದು ಮಗು ಪಠ್ಯದ ಶಿಕ್ಷಣವನ್ನಷ್ಟೇ ಪಡೆದರೆ ಶಿಕ್ಷಣ ಅಪೂರ್ಣವೆನಿಸುತ್ತದೆ ಅದರ ಜೊತೆಗೆ ಜೀವನ ಮೌಲ್ಯಗಳು ಅಳವಡಿಸಿಕೊಳ್ಳುವುದು ಕೂಡಾ ಅತ್ಯವಶ್ಯಕ.ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ ಏಕೆಂದರೆ ಇಲ್ಲಿ ಕೇವಲ ಪುಸ್ತಕಾಧಾರಿತ ಶಿಕ್ಷಣವಷ್ಟೇ ಅಲ್ಲದೆ ಮೌಲ್ಯಾಧಾರಿತ ಶಿಕ್ಷಣಕ್ಕೂ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ.















