ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ
Views: 734
ಕನ್ನಡ ಕರಾವಳಿ ಸುದ್ದಿ: ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ16 ನವೆಂಬರ್ 2025 ರಂದು ವಾರ್ಷಿಕ ಕ್ರೀಡಾಕೂಟವನ್ನು ಅತ್ಯುತ್ಸಾಹದಿಂದ ಆಯೋಜಿಸಲಾಯಿತು.
ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ಶಮಿತಾ ರಾವ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ,ಶಾಲಾ ಮುಖ್ಯೋಪಾಧ್ಯಾಯಿನಿ, ಉಪ ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರು ಭಾಗವಹಿಸಿದರು. ಪ್ರಾಥಮಿಕ ಹಾಗೂ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು.
ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ರೆನಿಟಾ ಲೋಬೊ ಹಾಗೂ ಸಾಧಕ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜೈಸನ್ ಲೂವಿಸ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು. ವಿದ್ಯಾರ್ಥಿನಿ ಶ್ರಾವಣಿ ವಿದ್ಯಾರ್ಥಿಗಳಿಗೆ ಶ್ರದ್ಧೆಯಿಂದ ಕ್ರೀಡಾ ವಚನ ಬೋಧಿಸಿದರು. ದೈಹಿಕ ಶಿಕ್ಷಕರಾದ ಸತೀಶ್ ಪ್ರದೀಪ,ಚಿದಾನಂದ ಹಾಗೂ ಜಯಲಕ್ಷ್ಮಿ ಅವರು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ತೀರ್ಪುಗಾರರಾಗಿ, ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿದರು. ದ್ವಿತೀಯ ಪಿಯುಸಿ ವಿಭಾಗದ ಪ್ರತ್ವೀಶ್,ರಕ್ಷಿತಾ, ಪ್ರತೀಕ್ಷ ಹಾಗೂ ಪ್ರಥಮ ಪಿಯುಸಿ ವಿಭಾಗದ ಆದಿತ್ಯ ಹಾಗೂ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ಆಕಾಶ್, ಮುತ್ತು , ಶ್ರಾವ್ಯ 10ನೇ ತರಗತಿಯ ಧನುಷ್ ,ಮೇಘನಾ ಚಾಂಪಿಯನ್ ಶಿಪ್ ಟ್ರೋಫಿಯನ್ನು ಪಡೆದುಕೊಂಡರು. ಪೂರ್ವ ಪ್ರಾಥಮಿಕ ವಿಭಾಗದಿಂದ ಪದವಿಪೂರ್ವ ಕಾಲೇಜಿನವರೆಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆ ಸಂಚಾಲಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ ,ಉಪ ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರು ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.ವಿದ್ಯಾರ್ಥಿನಿಯರಾದ ಶ್ರೀಜಾ ಹಾಗೂ ವೈಷ್ಣವಿ ಕಾರ್ಯಕ್ರಮವನ್ನು ನಿರೂಪಿಸಿದರು. ಹಿರಿಯ ಪ್ರಾಥಮಿಕ ವಿಭಾಗದ ಸಂಯೋಜಕಿ ಅವೀನಾ ವಂದನಾರ್ಪಣೆಗೈದರು.
ಸಂಸ್ಥೆಯ ಭಾಷಾ ಹಾಗೂ ಸಾಂಸ್ಕೃತಿಕ ನಿರ್ದೇಶಕರಾದ ಕುಮಾರಿ ಅಲಿಟಾ ರವರು ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ವೈಶಾಲಿ ಶೆಟ್ಟಿಯವರು ಸಹಕರಿಸಿದರು.


























