ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ
Views: 60
ಕನ್ನಡ ಕರಾವಳಿ ಸುದ್ದಿ: ಮದುವೆಗೆ ಹೆಣ್ಣು ಸಿಗಲಿಲ್ಲ ಅಂತ ಮನನೊಂದು 26 ವರ್ಷದ ಕುರಿಗಾಯಿ ಯುವಕ ತೆಂಗಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಮೂಲತಃ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಮೂಲದ ಯುವಕನಾಗಿದ್ದು, ಕಡೂರು ತಾಲ್ಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿ ಮಂದೆ ಬಿಟ್ಟುಕೊಂಡು ಕೆಲಸ ಮಾಡುತ್ತಿದ್ದ.
ಕುಮಾರ್ ಪೋಷಕರ ಬಳಿ ಮದುವೆ ಮಾಡುವಂತೆ ಕೇಳಿಕೊಂಡಿದ್ದು, ಆದರೆ, ಪೋಷಕರು ನಿನ್ನ ಅಣ್ಣಂದಿರಿಗೆ ಮದುವೆಗೆ ಆಗಿಲ್ಲ. ಹುಡುಗಿ ಸಿಗುತ್ತಿಲ್ಲ. ಅವರಿಗೆ ಆದ ಮೇಲೆ ನಿನಗೆ ಮಾಡುತ್ತೇವೆ. ಇಲ್ಲ ಅವನ ಜೊತೆಯೇ ಒಟ್ಟಿಗೆ ಮದುವೆ ಮಾಡುತ್ತೇವೆ ಎಂದಿದ್ದರು.
ಇದರಿಂದ ಮನನೊಂದು ಕುಮಾರ್ ಮದ್ಯ ಸೇವಿಸಿ ಬಳಿಕ ಮನನೊಂದು ತೆಂಗಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.






