ಇತರೆ

ಮದುವೆಯಾಗಲು ನಿರಾಕರಿಸಿದ ಮಹಿಳೆಯನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಪರಾರಿಯಾದ ಯುವಕ: ಇಂದು ಯಲ್ಲಾಪುರ ಬಂದ್

Views: 85

ಕನ್ನಡ ಕರಾವಳಿ ಸುದ್ದಿ: ಮದುವೆಗೆಯಾಗಲು ನಿರಾಕರಿಸಿದ ಮಹಿಳೆಯನ್ನು ಯುವಕನೊಬ್ಬ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ನಡೆದಿದೆ.

ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.

ರಫೀಕ್ ಎಂಬ ಯುವಕ ಕಳೆದ ಹಲವು ವರ್ಷಗಳಿಂದ ರಂಜಿತಾಳೊಂದಿಗೆ ಪ್ರೀತಿಯಲ್ಲಿದ್ದ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ ವಿಚ್ಛೇದನವಾಗಿದ್ದು, ಆಕೆಗೆ ಒಂದು ಮಗು ಕೂಡ ಇದೆ. ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದು, ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು.

ವಿಚ್ಛೇದನದ ಕೆಲ ತಿಂಗಳ ಬಳಿಕ ರಫೀಕ್ ಹಾಗೂ ರಂಜಿತಾಳ ನಡುವೆ ಪರಿಚಯ ಬೆಳೆದು, ಅದು ಪ್ರೀತಿಗೆ ತಿರುಗಿತ್ತು. ಇಬ್ಬರ ಕುಟುಂಬಗಳ ನಡುವೆ ಸಹ ಉತ್ತಮ ಬಾಂಧವ್ಯ ಇತ್ತು. ರಫೀಕ್ ಆಗಾಗ ರಂಜಿತಾಳ ಮನೆಗೆ ಬಂದು ಊಟ ಮಾಡುತ್ತಿದ್ದನಂತೆ

ಆದರೆ ಇತ್ತೀಚಿನ ಕೆಲವು ತಿಂಗಳಿಂದ ರಫೀಕ್ ಮದುವೆಯಾಗುವಂತೆ ನಿರಂತರ ಒತ್ತಡ ಹೇರುತ್ತಿದ್ದ.ಶನಿವಾರ ಎಂದಿನಂತೆ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ರಫೀಕ್ ರಂಜಿತಾಳನ್ನು ರಸ್ತೆ ಮಧ್ಯೆ ಅಡ್ಡಗಟ್ಟಿ ಮದುವೆ ವಿಚಾರವಾಗಿ ಪ್ರಶ್ನಿಸಿದ್ದಾನೆ. ಮದುವೆಗೆ ಮತ್ತೆ ನಿರಾಕರಣೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೋಪಗೊಂಡ ರಫೀಕ್, ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಗಂಭೀರವಾಗಿ ಗಾಯಗೊಂಡ ರಂಜಿತಾಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಘಟನೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಯಲ್ಲಾಪುರ ಬಂದ್

ರಂಜಿತಾ ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಹಿಂದೂಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 5 ಕೆ.ಎಸ್.ಆರ್.ಪಿ, ಆರು ಡಿ.ಆರ್ ತುಕಡಿ, ಹೆಚ್ಚುವರಿ ಹೊರಜಿಲ್ಲಾ ಪೊಲೀಸರ ನಿಯೋಜನೆ ಮಾಡಲಾಗಿದೆ. ಇಬ್ಬರು ಡಿ.ವೈ.ಎಸ್.ಪಿ, ಮೂರು ಸಿಪಿಐ ನೇತ್ರತ್ವದಲ್ಲಿ ರಫಿಕ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Related Articles

Back to top button
error: Content is protected !!