ಮದುವೆಯಾದ ಪುರುಷ ಲಿವ್-ಇನ್ ಸಂಬಂಧ ಹೊಂದುವುದು ಅಪರಾಧವಲ್ಲ
Views: 63
ಕನ್ನಡ ಕರಾವಳಿ ಸುದ್ದಿ: ವಿವಾಹಿತ ಪುರುಷ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿರುವುದು ಕಾನೂನಿನ ಅಡಿಯಲ್ಲಿ ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಆತನಿಗೆ ಮದುವೆಯಾಗಿದೆ ಎಂಬ ವಿಷಯ ತಿಳಿದಿದ್ದರೂ ಮಹಿಳೆ ಆತನೊಂದಿಗೆ ಲಿವ್ ರಿಲೇಶನ್‌ಶಿಪ್ ನಲ್ಲಿದ್ದರೆ ಅದು ತಪ್ಪಲ್ಲ ಎಂದು ಕೋರ್ಟ್ ಹೇಳಿದೆ. ಆ ಮಹಿಳೆಯ ಕುಟುಂಬದಿಂದಲೇ ಬೆದರಿಕೆ ಎದುರಿಸುತ್ತಿರುವ ಲಿವ್-ಇನ್ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಪ್ರಕರಣವನ್ನು ಆಲಿಸಿದ ನ್ಯಾಯಾಲಯ ವಿವಾಹಿತ ಪುರುಷನು ಪರಸರ ಒಪ್ಪಿಗೆಯ ಮೂಲಕ ವಯಸ್ಕ ಮಹಿಳೆಯ ಜೊತೆ ಒಟ್ಟಿಗೆ ವಾಸಿಸುವುದು ಯಾವುದೇ ಅಪರಾಧವಲ್ಲ ಎಂದು ಹೇಳಿದೆ.
ವಿವಾಹಿತ ಪುರುಷನು ಮಹಿಳೆಯ ಒಪ್ಪಿಗೆಯ ಮೂಲಕ ಲಿವ್-ಇನ್ ಸಂಬಂಧದಲ್ಲಿ ವಾಸಿಸುವುದು ಮೊಕದ್ದಮೆ ಹೂಡಬಹುದಾದ ಯಾವುದೇ ಅಪರಾಧವಲ್ಲ, ನೈತಿಕತೆ ಮತ್ತು ಕಾನೂನನ್ನು ದೂರವಿಡಬೇಕು. ಹಾಗಂತ ಕಾನೂನಿನಡಿ ಅದು ಅಪರಾಧವಲ್ಲ ಎಂಬ ಮಾತ್ರಕ್ಕೆ ಸಾಮಾಜಿಕವಾಗಿಯೂ ಅದು ಸರಿ ಎಂದು ಹೇಳಲಾಗದು ಎಂದು ನ್ಯಾಯಪೀಠ ಹೇಳಿದೆ. ನ್ಯಾಯಾಲಯವು ನೈತಿಕತೆ ಮತ್ತು ಕಾನೂನನ್ನು ಬೇರ್ಪಡಿಸಿ ನೋಡಬೇಕೆಂದು ಹೇಳಿದೆ. ಲಿವ್ -ಇನ್ ರಿಲೇಶನ್‌ಶಿಪ್‌ನಲ್ಲಿರುವ ವಿವಾಹಿತ ವ್ಯಕ್ತಿ ಯಾವುದೇ ಅಪರಾಧವನ್ನು ಮಾಡಿಲ್ಲ. ವಯಸ್ಕ ಮಹಿಳೆಯೊಂದಿಗಿನ ಅವರ ಲಿವ್-ಇನ್ ಸಂಬಂಧವು ಸಮ್ಮತಿಯಂತೆ ಕಾಣುತ್ತದೆ ಎಂದು ಕೋರ್ಟ್ ಹೇಳಿದೆ.






