ಯುವಜನ

ಮದುವೆ ನಿಶ್ಚಯವಾಗಿದ್ದ ಯುವತಿ ಕಸದ ಲಾರಿಯಡಿಗೆ ಸಿಲುಕಿ ಸಾವು

Views: 117

ಬೆಂಗಳೂರು: ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ನಿನ್ನೆ ಕಸದ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ.

ಬೆಳಿಗ್ಗೆ ಮದುವೆ ಬಗ್ಗೆ ಪ್ರಸ್ತಾಪವಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಪ್ರಶಾಂತ್ (25) ಮತ್ತು ಶಿಲ್ಪ (25) ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ BBMP ಕಸದ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐಟಿಪಿಎಲ್ ಟಿಸಿಎಸ್ನಲ್ಲಿ ಕೆಲಸ ಮಾಡ್ತಿದ್ದರು.

ಶಿಲ್ಪ ಆಂಧ್ರದ ಇಂದುಪುರ ನಿವಾಸಿ. ನಾಗವಾರದ ಪಿಜಿಯಲ್ಲಿ ವಾಸ ಮಾಡಿಕೊಂಡಿದ್ದಳು. ಈಕೆ ತಂದೆ ವೆಂಕಟರಾಮ ರೆಡ್ಡಿ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.

ವೆಂಕಟರಾಮ ರೆಡ್ಡಿಗೆ ಒಟ್ಟು ಮೂವರು ಹೆಣ್ಣು ಮಕ್ಕಳು. ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಆಗಿದೆ. ಶಿಲ್ಪ ಕೊನೆಯ ಮಗಳು. ಆಕೆಯ ಮದುವೆ ತಯಾರಿ ಕೂಡ ನಡೀತಿತ್ತು. ಆದರೆ ಅಷ್ಟರಲ್ಲಿ ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾಳೆ.

ತಂದೆ ವೆಂಕಟರಾಮ ರೆಡ್ಡಿ ಮಗಳ ಮದುವೆಗೆ ಚಿನ್ನವನ್ನು ಮಾಡಿಸಿಟ್ಟಿದ್ದನು. ಭಾನುವಾರ ಬೆಳಗ್ಗೆ ಕೂಡ ಮದುವೆ ಮಾತುಕತೆ ಪ್ರಸ್ತಾಪ ಆಗಿತ್ತು. ಆದರೆ ನಿನ್ನೆ ಸಂಜೆ ಹೊತ್ತಿಗೆ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದಾಳೆ.

 

Related Articles

Back to top button
error: Content is protected !!